ಭಾರತ ದೇಶ 1947 ಆಗಸ್ಟ್ 15 ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲೆಲ್ಲಾ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ ಹಾಡಿ, ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಈ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ.
ಸ್ವಾತಂತ್ರ್ಯೋತ್ಸವದಂದು ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನಶಿಲ್ಪಿ ಭಾರತರತ್ನ ಅಂಬೇಡ್ಕರ್ ರವರ ಪೊಟೋ ಇಡುವ ಬಗ್ಗೆ ಜ್ಞಾಪನ